ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.20ರ ಸೋಮವಾರ 98 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 36, ಉಡುಪಿ ತಾಲೂಕಿನ 56 ಹಾಗೂ ಕಾರ್ಕಳ ತಾಲೂಕಿನ 6 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 53 ಪುರುಷರು, 36 ಮಹಿಳೆಯರು, 10 ಮಕ್ಕಳು ಸೇರಿದ್ದಾರೆ.
ಇವರಲ್ಲಿ 3 ಮಂದಿ ಮಂಗಳೂರು, ಓರ್ವ ವ್ಯಕ್ತಿ ಬೆಂಗಳೂರು, 2 ಮಂದಿ ಮಸ್ಕತ್, ಓರ್ವ ಸೌದಿ ಅರೆಬಿಯಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಸಾರಿ 2 ಪ್ರಕರಣ, ILI 23 ಪ್ರಕರಣಗಳಾಗಿದ್ದು ಉಳಿದ ಪ್ರಕರಣಗಳು ಪ್ರಾಥಮಿಕ ಸಂಪರ್ಕದಿಂದ ಬಂದಿದೆ. ಇಂದು 22 ಮಂದಿ ಬಿಡುಗಡೆಗೊಂಡಿದ್ದಾರೆ.
251 ನೆಗೆಟಿವ್:
ಈ ತನಕ ಒಟ್ಟು 24,891 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 22,357 ನೆಗೆಟಿವ್, 2,321 ಪಾಸಿಟಿವ್ ಬಂದಿದ್ದು, 661 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 251 ನೆಗೆಟಿವ್, 99 ಪಾಸಿಟಿವ್ ಬಂದಿದೆ. ಒಟ್ಟು 2,094 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.
661 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 2,321 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,650 ಮಂದಿ ಬಿಡುಗಡೆಯಾಗಿದ್ದು, 661 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 10 ಮಂದಿ ಮೃತಪಟ್ಟಿದ್ದಾರೆ.