ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.22ರ ಬುಧವಾರ 281 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಒಟ್ಟು ಪ್ರಕರಣಗಳಲ್ಲಿ 160 ಪುರುಷರು, 100 ಮಹಿಳೆಯರು, 21 ಮಕ್ಕಳು ಸೇರಿದ್ದಾರೆ.
135 ನೆಗೆಟಿವ್:
ಈ ತನಕ ಒಟ್ಟು 25,748 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 22,595 ನೆಗೆಟಿವ್, 2,686 ಪಾಸಿಟಿವ್ ಬಂದಿದ್ದು, 467 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 135 ನೆಗೆಟಿವ್, 281 ಪಾಸಿಟಿವ್ ಬಂದಿದೆ. ಒಟ್ಟು 2,004 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.
899 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 2,686 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1,776 ಮಂದಿ ಬಿಡುಗಡೆಯಾಗಿದ್ದು, 899 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 11 ಮಂದಿ ಮೃತಪಟ್ಟಿದ್ದಾರೆ.
ಇನ್ನಷ್ಟು ಮಾಹಿತಿಗೆ ಕೆಲವು ಸಮಯದ ನಂತರ ಇದೇ ಲಿಂಕ್ ನೋಡಿ