ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.31ರ ಶುಕ್ರವಾರ 213 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
455 ನೆಗೆಟಿವ್:
ಈ ತನಕ ಒಟ್ಟು 31,665 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 26,747 ನೆಗೆಟಿವ್, 4,356 ಪಾಸಿಟಿವ್ ಬಂದಿದ್ದು, 562 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 455 ನೆಗೆಟಿವ್, 213 ಪಾಸಿಟಿವ್ ಬಂದಿದೆ. ಒಟ್ಟು 1,419 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.
1,805 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 4,356 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,552ಮಂದಿ ಬಿಡುಗಡೆಯಾಗಿದ್ದು, 1,805 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 29 ಮಂದಿ ಮೃತಪಟ್ಟಿದ್ದಾರೆ.