ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ದೇವಸ್ಥಾನದಲ್ಲಿ ಅತ್ಯಂತ ಸರಳವಾಗಿ ವರಮಹಾಲಕ್ಷ್ಮೀ ಪೂಜೆ ನಡೆಯಿತು.
ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಈ ಸಂದರ್ಭ ದೇವಳದ ಆಡಳಿತ ಮಂಡಳಿ ಪದಾಧಿಕಾರಿಗಳು ಉಪಸ್ಥಿತಿರಿದ್ದರು.
ದೇವಸ್ಥಾನ ಪ್ರವೇಶಕ್ಕೆ ಪೂರ್ವದಲ್ಲಿ ಮಾಸ್ಕ್ ಕಡ್ಡಾಯ, ಸ್ಯಾನಿಟೈಸರ್ ಮಾಡಿಕೊಂಡೆ ಒಳ ಪ್ರವೇಶಿಸುವಂತೆ ನೋಡಿಕೊಳ್ಳಲಾಯಿತು. ಸಾಮಾಜಿಕ ಅಂತರವನ್ನು ಭಕ್ತಾಧಿಗಳು ಕಾಪಾಡಿಕೊಂಡಿದ್ದರು.