ಕುಂದಾಪುರ: ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಜು. 16ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಧರ್ಮದರ್ಶಿ ಕೃಷ್ಣಪ್ರಸಾದ ಅಡ್ಯಂತಾಯ, ದೇಗುಲದ ಕಾಯನಿರ್ವಹಣಾಧಿಕಾರಿ ಪ್ರಸನ್ನ, ಉಪಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಅಧೀಕ್ಷಕ ರಾಮಕೃಷ್ಣ ಅಡಿಗ, ಕೌಶಿಕ್ ಮುಖರ್ಜಿ ಅವರನ್ನು ಸ್ವಾಗತಿಸಿ, ಗೌರವಿಸಿದರು.
ನಂತರ ಅವರು ಕುಂದಾಪುರಕ್ಕೆ ಆಗಮಿಸಿ ಅರಣ್ಯ ಹಾಗೂ ಇತರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಗರದ ಹೊರವಲಯದ ವಡೇರಹೋಬಳಿ ಬಳಿ ಇರುವ ಕಾಂಡ್ಲ ನಡುತೋಪು ಹಾಗೂ ನೈಸರ್ಗಿಕ ಕಾಂಡ್ಲವನ್ನು ಗುರುವಾರ ವೀಕ್ಷಿಸಿದರು.
ಉಡುಪಿ ಜಿಲ್ಲಾಧಿಕಾರಿ ಡಾ| ವಿಶಾಲ್, ಉಪ ಅರಣ್ಯ ಅಧಿಕಾರಿ ಪ್ರಕಾಶ್ ನೆಟಾಲ್ಕರ್, ವನ್ಯಜೀವಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿರ್ಮಲಾ, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತೆ ಚಾರುಲತಾ ಸೋಮಲ್, ವಲಯ ಅರಣ್ಯ ಸಂರಕ್ಷಣಾಧಿಕಾರಿ ಜಿ. ಲೋಹಿತ್, ಉಪ ಅರಣ್ಯ ಅಧಿಕಾರಿ ಗುರುರಾಜ್ ಕಾವ್ರಾಡಿ, ದಿಲೀಪ್ ಕುಮಾರ್, ಕುಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ, ವೃತ್ತ ನಿರೀಕ್ಷಕ ದಿವಾಕರ್ ಮೊದಲಾದವರು ಉಪಸ್ಥಿತರಿದ್ದರು.