ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬಸ್ರೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ಯಾವ್ಯ ಎಸ್. ಮೊಗವೀರ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ 621 ಅಂಕ ಗಳಿಸಿ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿದ್ದಾಳೆ. ಈಕೆ ಶೇಖರ ಮೊಗವೀರ ಹಾಗೂ ಗುಲಾಬಿ ದಂಪತಿಗಳ ಪುತ್ರಿ.
ಶ್ರಾವ್ಯ ಕನ್ನಡದಲ್ಲಿ 125, ಇಂಗ್ಲೀಷ್ 100, ಹಿಂದಿ 100, ಗಣಿತ 98, ವಿಜ್ಞಾನ 98 ಹಾಗೂ ಸೋಶಿಯಲ್ ಸ್ಟಡೀಸ್ನಲ್ಲಿ 100 ಅಂಕ ಪಡೆದಿದ್ದಾಳೆ. ಪಿಯುಸಿಯಲ್ಲಿ ವಿಜ್ಞಾನ ವಿಷಯ ಆಯ್ದುಕೊಂಡು ಮುಂದೆ ವೈದ್ಯಳಾಗುವ ಕನಸು ಹೊತ್ತಿದ್ದಾಳೆ. ವಿದ್ಯಾರ್ಥಿನಿಯನ್ನು ಶಾಲೆಯ ಮುಖ್ಯೋಪಧ್ಯಾಯರು, ಶಿಕ್ಷಕರು ಅಭಿನಂದಿಸಿದ್ದಾರೆ.
ಇದನ್ನೂ ಓದಿ:
► ಉಪ್ಪುಂದದ ಸುರಭಿ ಎಸ್. ಶೆಟ್ಟಿ ರಾಜ್ಯಕ್ಕೆ ದ್ವಿತೀಯ. 625ರಲ್ಲಿ 624 ಅಂಕ – https://kundapraa.com/?p=40173 .
► ಎಸ್.ಎಸ್.ಎಲ್‌ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆಗೆ ಎ ಗ್ರೇಡ್, 7ನೇ ಸ್ಥಾನ – https://kundapraa.com/?p=40160 .










