ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.13ರ ಗುರುವಾರ 402 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
ಜಿಲ್ಲೆಯಲ್ಲಿ ಒಟ್ಟು 7174 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 4138 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2966 ಸಕ್ರಿಯ ಪ್ರಕರಣಗಳಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಹಾಗೂ 1290 ಮಂದಿ ಹೋಮ್ ಐಸೋಲೇಶನ್ ಮೂಲಕ ನಿಗಾ ಇರಿಸಲಾಗಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 70 ಮಂದಿ ಮೃತಪಟ್ಟಿದ್ದಾರೆ. ಇಂದು ಒಟ್ಟು 290 ಮಂದಿ ಬಿಡುಗಡೆಗೊಂಡಿದ್ದಾರೆ.