ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ, ಆ.13: ಪ್ರಸ್ತುತ ಸಾಲಿನ ವಿಕಲಚೇತನಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ನೀಡುವ ರಾಷ್ಟ್ರ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಸಾಧನೆಗಳ ಮತ್ತು ದಾಖಲೆಗಳ ಬಗ್ಗೆ ಸಂಕ್ಷೀಪ್ತ ಮಾಹಿತಿಯೊಂದಿಗೆ ಆಸಕ್ತರು ಆಗಸ್ಟ್ 18ರ ಒಳಗೆ ವಿಕಲಚೇತನರ ಸಬಲೀಕರಣ ಅಧಿಕಾರಿ ಕಛೇರಿ, ತಳ ಅಂತಸ್ತು, ಕೊಠಡಿ ಸಂಖ್ಯೆ 4, 5 ರಜತಾದ್ರಿ ಮಣಿಪಾಲ ಉಡುಪಿ ಕಛೇರಿಗೆ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು www.disabilityaffairs.gov.in ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಅಥವಾ ದೂರವಾಣಿ ಸಂಖ್ಯೆ 0820-2574810 ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:
► ವಿಶೇಷಚೇತನರಿಗೆ ಡಿಪ್ಲೊಮ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ – https://kundapraa.com/?p=40286 .