ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸ್ತುತ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ಜನಾಂಗಕ್ಕೆ ಸ್ವಯಂ ಉದ್ಯೋಗ, ನೇರಸಾಲ ಉದ್ಯಮಶೀಲತಾ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ನಿಗಮದಿಂದ ಯಾವುದೇ ಸೌಲಭ್ಯ ಪಡೆಯದ ೧೮ರಿಂದ ೬೦ ವರ್ಷದ ಒಳಗಿನವರು. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ನಿಗಮದ ವೆಬ್‌ಸೈಟ್ https://kmvstdcl.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಬಿ ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ-576104, ದೂರವಾಣಿ ಸಂಖ್ಯೆ – 0820-2574884 ಗೆ ಸಂಪರ್ಕಿಸಬಹುದೆಂದು ಪ್ರಕಟಣೆಯ ತಿಳಿಸಿದೆ.

Leave a Reply