ಮರವಂತೆ ಬ್ರೇಕ್ ವಾಟರ್ 2ನೇ ಹಂತ, ಗಂಗೊಳ್ಳಿ-ಕೊಡೇರಿ ಬಂದರು ಅಭಿವೃದ್ಧಿಗೆ 93.8 ಕೋಟಿ ರೂ. ಅನುದಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆ ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿ, ಗಂಗೊಳ್ಳಿ ಮೀನುಗಾರಿಕಾ ಬಂದರು ದುರಸ್ತಿ ಹಾಗೂ ಕೊಡೇರಿ ಮೀನುಗಾರಿಕಾ ಬಂದರು ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಒಟ್ಟು 93.8 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ.

Call us

Click Here

ಮರವಂತೆ ಬ್ರೇಕ್ ವಾಟರ್ ಎರಡನೇ ಹಂತದ ಕಾಮಗಾರಿಗೆ 85 ಕೋಟಿ ರೂ. ಅನುದಾನ, ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಡಯಾಫ್ರಾಮ್ ಗೋಡೆ ಹಾಗೂ ಜೆಟ್ಟಿಯನ್ನು ಮರುನಿರ್ಮಿಸುವ ಕಾಮಗಾರಿಗಾಗಿ 4 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಕೊಡೇರಿ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗಾಗಿ ರೂ. 2 ಕೋಟಿ ಅನುದಾನ ಮತ್ತು ಕೊಡೇರಿ ನದಿದಂಡೆ ಸಂರಕ್ಷಣೆ ಹಾಗೂ ನೇವಿಗೇಷನ್ ಚಾನೆಲ್ ಕಾಮಗಾರಿಗಾಗಿ 2.80 ಕೋಟಿ ರೂ. ಅನುದಾನ ಮಂಜೂರು ಮಾಡಿ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಮೀನುಗಾರರು ಹಾಗೂ ನಾಗರಿಕರ ಮನವಿಯಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಬಂದರು ದುರಸ್ತಿ ಹಾಗೂ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ರಾಜ್ಯ ಸರಕಾರಕ್ಕೆ ಶಿಪಾರಸ್ಸು ಮಾಡಿದ್ದು, ಅನುದಾನ ಮಂಜೂರು ಮಾಡಿಸಿದ್ದಕ್ಕಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹಾಗೂ ಬಂದರು ಮತ್ತು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

 

Leave a Reply