ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶನಿವಾರ 241 ಪಾಸಿಟಿವ್, 1556 ನೆಗೆಟಿವ್

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.15ರ ಶನಿವಾರ 241 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 70, ಉಡುಪಿ ತಾಲೂಕಿನ 138 ಹಾಗೂ ಕಾರ್ಕಳ ತಾಲೂಕಿನ 30 ಮಂದಿಗೆ ಪಾಸಿಟಿವ್ ಬಂದಿದೆ. 3 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

Call us

Click Here

ಒಟ್ಟು ಪ್ರಕರಣಗಳಲ್ಲಿ 191 ಸಿಂಥಮೇಟಿವ್ ಹಾಗೂ 50 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 127 ಪುರುಷರು, 114 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 130, ILI 40 ಪ್ರಕರಣವಿದ್ದು, 71 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ.

ಇಂದು 102 ಮಂದಿ ಆಸ್ಪತ್ರೆಯಿಂದ ಹಾಗೂ 127 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 65 ಹಾಗೂ 43 ವರ್ಷದ ಉಡುಪಿ ತಾಲೂಕಿನ ಇಬ್ಬರು ಪುರುಷರು ಇಂದು ಮೃತಪಟ್ಟಿದ್ದಾರೆ.

1,556 ನೆಗೆಟಿವ್:
ಈ ತನಕ ಒಟ್ಟು 54794 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 45581 ನೆಗೆಟಿವ್, 7738 ಪಾಸಿಟಿವ್ ಬಂದಿದ್ದು, 1475 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1556 ನೆಗೆಟಿವ್, 241 ಪಾಸಿಟಿವ್ ಬಂದಿದೆ.

2,560 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 7738 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 5101 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2560 ಸಕ್ರಿಯ ಪ್ರಕರಣಗಳಲ್ಲಿ 1383 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1177 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 77 ಮಂದಿ ಮೃತಪಟ್ಟಿದ್ದಾರೆ.

Click here

Click here

Click here

Click Here

Call us

Call us

 

Leave a Reply