ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆಗೆ ಆ.14ರಂದು ಸರಕಾರ ಜಾರಿಮಾಡಿದ್ದ ಮಾರ್ಗಸೂಚಿಯಲ್ಲಿ ಸಡಿಲಿಕೆ ಮಾಡಲಾಗಿದೆ.
ಪರಿಷ್ಕೃತ ಮಾರ್ಗಸೂಚಿ:
- ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ದೇವಸ್ಥಾನ, ಮನೆ ಅಥವಾ ಸರ್ಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.
- ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸುವುದು.
- ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮುನಿಷಿಪಲ್ ಕಾರ್ಪೋರೇಷನ್/ಸ್ಥಳೀಯ ಆಡಳಿತದ ಪೂರ್ವಾನುಮತಿ ಪಡೆಯುವುದು. ಒಂದು ವಾರ್ಡಿಗೆ/ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವ ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು.
- ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣ ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು.
- ಯಾವುದೇ ರೀತಿಯ ಸಾಂಸ್ಕೃತಿ/ಸಂಗೀತ/ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.
- ಗಣೇಶ ಮೂರ್ತಿಯನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ. ಇದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
- ಮನೆಯಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯನ್ನು ಮನೆಯಲ್ಲಿಯೇ ಹಾಗೂ ಸಾರ್ವಜನಿಕ ಗಣೇಶ ಮೂರ್ತಿಯನ್ನು ಸ್ಥಳೀಯ ಸಂಸ್ಥೆಗಳು ಈಗಾಗಲೇ ನಿರ್ಮಿಸಿರುವು ಮೊಬೈಲ್ ಟ್ಯಾಂಕ್ ಅಥವಾ ಕೃತಕ ಹೊಂಡದಲ್ಲಿ ವಿಸರ್ಜಿಸುವುದು.
- ದರ್ಶನಕ್ಕಾಗಿ ಆಗಮಿಸುವುದ ಭಕ್ತರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು. ಮಾಸ್ಕ್ ಧರಿಸುವುದು ಮತ್ತು ಸ್ಯಾನಿಟೈಸರ್ ಬಳಸುವುದು ಕಡ್ಡಾಯ.