ಅಂಬಿಗರ ಚೌಡಯ್ಯ ನಿಗಮದಿಂದ ವಿವಿಧ ಸೌಲಭ್ಯಗಳು

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸ್ತಕ ಸಾಲಿನ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ದಿಂದ ಹಿಂದುಳಿದ ವರ್ಗಗಳ ಪ್ರವರ್ಗ-(1)ರ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ/ಅಂಬಿ, ಬಾರ‍್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆಬೆಸ್ತ/ಗುಂಡೆಬೆಸ್ತ, ಹರಿಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಿಖಾರ್ವಿ, ಕೋಳಿಮಹದೇವ್, ಮಡ್ಡರ್,ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ್, ಸುಣಗಾರ, ತೊರೆಯ ಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ , ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ,ಅರಿವು ಶೈಕ್ಷಣಿಕ ಸಾಲ ಯೋಜನೆ ,ಗಂಗಾಕಲ್ಯಾಣ ನೀರಾವರಿ ಯೋಜನೆ ಕೌಶಲ್ಯಾಭಿವೃಧ್ಧಿ/ಉದ್ಯಮಶೀಲತಾ ತರಬೇತಿ ಗಳಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 1 ಕೊನೆಯ ದಿನವಾಗಿದೆ. ಅರ್ಜಿಯನ್ನು ಆನ್-ಲೈನ್ ಮೂಲಕ  http://ambigaradevelopment.karnataka.gov.in ಮೂಲಕ ಅಥವಾ ನೇರವಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸುವಂತೆ ಕೋರಿದೆ.

Leave a Reply