ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸಹಾಯಧನ ಮತ್ತು ಸಾಲ ಸೌಲಭ್ಯ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸವಿತಾ ಸಮಾಜ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆ ಯಲ್ಲಿ ಸಾಲ ಮತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Call us

Click Here

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ೩ ಕೊನೆಯ ದಿನವಾಗಿದ್ದು, ಅರ್ಜಿ ಮತ್ತು ಅಗತ್ಯ ದಾಖಾಲಾತಿಗಳನ್ನು ಆನ್-ಲೈನ್ www.dbcdc.karnataka.gov.in ವೆಬ್‌ಸೈಟ್ ಮೂಲಕ ಅಥವಾ ನೇರವಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲೆ, ಅಥವಾ ವೆಬ್ ಸೈಟ್ ನ್ನು ಸಂಪರ್ಕಿಸುವಂತೆ ತಿಳಿಸಿದೆ.

Leave a Reply