ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಬುಧವಾರ 375 ಪಾಸಿಟಿವ್,1,608 ನೆಗೆಟಿವ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.19ರ ಬುಧವಾರ 375 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 131, ಉಡುಪಿ ತಾಲೂಕಿನ 215 ಹಾಗೂ ಕಾರ್ಕಳ ತಾಲೂಕಿನ 27 ಮಂದಿಗೆ ಪಾಸಿಟಿವ್ ಬಂದಿದೆ. 2 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

Call us

Click Here

ಒಟ್ಟು ಪ್ರಕರಣಗಳಲ್ಲಿ 99 ಸಿಂಥಮೇಟಿವ್ ಹಾಗೂ 276 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 195 ಪುರುಷರು, 180 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 205, ILI 67, ಸಾರಿ 5 ಪ್ರಕರಣವಿದ್ದು, 93 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 5 ಮಂದಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 111 ಮಂದಿ ಆಸ್ಪತ್ರೆಯಿಂದ ಹಾಗೂ 70 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ.

1,608 ನೆಗೆಟಿವ್:
ಈ ತನಕ ಒಟ್ಟು 59173 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 49432 ನೆಗೆಟಿವ್, 9041 ಪಾಸಿಟಿವ್ ಬಂದಿದ್ದು, 700 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1608 ನೆಗೆಟಿವ್, 375 ಪಾಸಿಟಿವ್ ಬಂದಿದೆ.

2,831 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 9041 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 6132 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2831 ಸಕ್ರಿಯ ಪ್ರಕರಣಗಳಲ್ಲಿ 1303 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1528 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 78 ಮಂದಿ ಮೃತಪಟ್ಟಿದ್ದಾರೆ.

 

Click here

Click here

Click here

Click Here

Call us

Call us

Leave a Reply