ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪ್ರಸ್ತುತ ಕೋವಿಡ್ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣದ ಮುಖಾಂತರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ನಡುವೆ ಸಂವಹನವನ್ನು ನಡೆಸುವುದು ಅತ್ಯಮೂಲ್ಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ತರಗತಿಗಳನ್ನು ನಡೆಸುವ ಸಲುವಾಗಿ ಪ್ರಾಧ್ಯಾಪಕರಿಗೆ ಪುನಶ್ಚೇತನ ಕಾರ‍್ಯಾಗಾರವನ್ನು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು IQAC ಘಟಕದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು.
ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶೈಲೇಶ್ ಬಿ. ಸಿ. ಪ್ರಾಧ್ಯಾಪಕರಿಗೆ google classroom ಮತ್ತು edpuzzle ತಂತ್ರಜ್ಞಾನದ ಉಪಯೋಗ ಮತ್ತು ಹೇಗೆ ಬಳಸಬೇಕು ಎಂಬುದರ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಅಧ್ಯಾಪಕ ವೃಂದದವರು ಕಾರ‍್ಯಕ್ರಮದಲ್ಲಿ ಭಾಗವಹಿಸಿ, ಪ್ರಯೋಜನವನ್ನು ಪಡೆದುಕೊಂಡರು.