ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.24ರ ಸೋಮವಾರ 103 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 19, ಉಡುಪಿ ತಾಲೂಕಿನ 50 ಹಾಗೂ ಕಾರ್ಕಳ ತಾಲೂಕಿನ 26 ಮಂದಿಗೆ ಪಾಸಿಟಿವ್ ಬಂದಿದೆ. 8 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.
ಒಟ್ಟು ಪ್ರಕರಣಗಳಲ್ಲಿ 28 ಸಿಂಥಮೇಟಿವ್ ಹಾಗೂ 75 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 55ಪುರುಷರು, 48 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 52, ILI 23, ಸಾರಿ 2 ಪ್ರಕರಣವಿದ್ದು, 25 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.
ಇಂದು 57 ಮಂದಿ ಆಸ್ಪತ್ರೆಯಿಂದ ಹಾಗೂ 99 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕಾರ್ಕಳದ 85 ವರ್ಷದ ವೃದ್ಧೆ, ಉಡುಪಿ 75 ವರ್ಷದ ವೃದ್ಧ, ಕಾರ್ಕಳದ 85 ವರ್ಷದ ವೃದ್ಧೆ, ಕಾರ್ಕಳದ 49 ವರ್ಷದ ಮಹಿಳೆ ಹಾಗೂ ಉಡುಪಿಯ 55 ವರ್ಷದ ಪುರುಷ ಸೇರಿದಂತೆ ಒಟ್ಟು 5 ಮಂದಿ ಇಂದು ಮೃತರಾಗಿದ್ದಾರೆ.
684 ನೆಗೆಟಿವ್:
ಈ ತನಕ ಒಟ್ಟು 65306 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 54113 ನೆಗೆಟಿವ್, 10236 ಪಾಸಿಟಿವ್ ಬಂದಿದ್ದು, 957 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 684 ನೆಗೆಟಿವ್, 103 ಪಾಸಿಟಿವ್ ಬಂದಿದೆ.
2,590 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 10236 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 7557 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2590 ಸಕ್ರಿಯ ಪ್ರಕರಣಗಳಲ್ಲಿ 1034 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1556 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 89 ಮಂದಿ ಮೃತಪಟ್ಟಿದ್ದಾರೆ.















