ಗಂಗೊಳ್ಳಿ: ಕುಂದಾಪುರದ ವಿ.ಕೆ.ಆರ್.ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚಿಗೆ ನಡೆದ 2015-16ನೇ ಸಾಲಿನ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.
ವಿಜೇತ ತಂಡದ ವಿದ್ಯಾರ್ಥಿಗಳು ಪ್ರಿಯಾಂಕಾ, ಅನುಶ್ರೀ, ಸನ್ಮಿತಾ ಹಾಗೂ ಸಂಜನಾ, ಅವರು ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಿ ಡಿ’ಕೋಸ್ತಾ, ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಎಸ್. ಮತ್ತು ದೈಹಿಕ ಶಿಕ್ಷಣ ಶಿಕ್ಷಕ ರತ್ನಾಕರ ಶೆಟ್ಟಿ ಅವರೊಂದಿಗಿರುವುದು ನೋಡಬಹುದು.