ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಗುರುವಾರ 226 ಪಾಸಿಟಿವ್, 893 ನೆಗೆಟಿವ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಸೆ.3ರ ಗುರುವಾರ 226 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 59, ಉಡುಪಿ ತಾಲೂಕಿನ 137 ಹಾಗೂ ಕಾರ್ಕಳ ತಾಲೂಕಿನ 25 ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಈತನಕ ಜಿಲ್ಲೆಯಲ್ಲಿ ಒಟ್ಟು 106 ಮಂದಿ ಮೃತಪಟಿದ್ದಾರೆ.

Call us

Click Here

ಒಟ್ಟು ಪ್ರಕರಣಗಳಲ್ಲಿ 118 ಸಿಂಥಮೇಟಿವ್ ಹಾಗೂ 108 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 128 ಪುರುಷರು, 98 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 121, ILI 68, ಸಾರಿ 8 ಪ್ರಕರಣವಿದ್ದು, 27 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಹಾಗೂ ಓರ್ವ ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.

ಇಂದು 134 ಮಂದಿ ಆಸ್ಪತ್ರೆಯಿಂದ ಹಾಗೂ 194 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕುಂದಾಪುರದ 46 ವರ್ಷದ ಪುರುಷ, ಕಾರ್ಕಳದ 84 ವರ್ಷದ ವೃದ್ಧ, ಉಡುಪಿಯ 65 ವರ್ಷದ ವೃದ್ಧ ಹಾಗೂ 45 ವರ್ಷದ ಮಹಿಳೆ ಇಂದು ಮೃತಪಟ್ಟಿದ್ದಾರೆ.

893 ನೆಗೆಟಿವ್:
ಈ ತನಕ ಒಟ್ಟು 74284 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 61868 ನೆಗೆಟಿವ್, 12150 ಪಾಸಿಟಿವ್ ಬಂದಿದ್ದು, 266 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 893 ನೆಗೆಟಿವ್, 226 ಪಾಸಿಟಿವ್ ಬಂದಿದೆ.

2,115 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 12150 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 9601 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2115 ಸಕ್ರಿಯ ಪ್ರಕರಣಗಳಲ್ಲಿ 1045 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1070 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 106 ಮಂದಿ ಮೃತಪಟ್ಟಿದ್ದಾರೆ.

Click here

Click here

Click here

Click Here

Call us

Call us

 

Leave a Reply