ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಬುಧವಾರ 258 ಪಾಸಿಟಿವ್, 1 ಕೋವಿಡ್ ಸಾವು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಸೆ.9ರ ಬುಧವಾರ 258 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 39, ಉಡುಪಿ ತಾಲೂಕಿನ 162 ಹಾಗೂ ಕಾರ್ಕಳ ತಾಲೂಕಿನ 41 ಮಂದಿಗೆ ಪಾಸಿಟಿವ್ ಬಂದಿದೆ. 16 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

Call us

Click Here

ಒಟ್ಟು ಪ್ರಕರಣಗಳಲ್ಲಿ 144 ಸಿಂಥಮೇಟಿವ್ ಹಾಗೂ 114 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 171, ILI 49, ಸಾರಿ 7 ಪ್ರಕರಣವಿದ್ದು, 31 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ.

ಇಂದು 75 ಮಂದಿ ಆಸ್ಪತ್ರೆಯಿಂದ ಹಾಗೂ 143 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕಾರ್ಕಳದ 64 ವರ್ಷದ ಮಹಿಳೆ ಇಂದು ಮೃತಪಟ್ಟಿದ್ದಾರೆ.

1000 ನೆಗೆಟಿವ್:
ಈ ತನಕ ಒಟ್ಟು 80804 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 67091 ನೆಗೆಟಿವ್, 13345 ಪಾಸಿಟಿವ್ ಬಂದಿದ್ದು, 368 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1000 ನೆಗೆಟಿವ್, 258 ಪಾಸಿಟಿವ್ ಬಂದಿದೆ.

1,884 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 13345 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 11342 ಮಂದಿ ಬಿಡುಗಡೆಯಾಗಿದ್ದು, ಒಟ್ಟು 1884 ಸಕ್ರಿಯ ಪ್ರಕರಣಗಳಲ್ಲಿ 869 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1051 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 122 ಮಂದಿ ಮೃತಪಟ್ಟಿದ್ದಾರೆ.

Click here

Click here

Click here

Click Here

Call us

Call us

 

Leave a Reply