Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೊಂದಲಕಾರಿ ಸುದ್ದಿ ಪ್ರಸಾರ ಮಾಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್
    ಉಡುಪಿ ಜಿಲ್ಲೆ

    ಗೊಂದಲಕಾರಿ ಸುದ್ದಿ ಪ್ರಸಾರ ಮಾಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್

    Updated:11/09/2020No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ: ಸ್ಥಳೀಯ ಕೇಬಲ್ ವಾಹಿನಿ ಮತ್ತು ಸಾಮಾಜಿಕ ತಾಣಗಳು ಸಮಾಜದಲ್ಲಿ ಗೊಂದಲ ಉಂಟು ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.

    Click Here

    Call us

    Click Here

    ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಇತ್ತೀಚೆಗೆ ಕೆಲವು ಸಾಮಾಜಿಕ ಜಾಲತಾಣಗಳು ಪ್ರಸಾರ ಮಾಡಿದ ಅಪಪ್ರಚಾರದಿಂದ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೆ ಸಾರ್ವಜನಿಕರು ಅಸಹಕಾರ ತೋರುತ್ತಿದ್ದು, ಇದರಿಂದ ರೋಗದ ಗಂಭೀರ ಪರಿಣಾಮ ಎದುರಿಸುವ ರೋಗಿಗಳ ಸಂಖ್ಯೆ ಅಧಿಕವಾಗಿದ್ದು, ಐಸಿಯು ಬೆಡ್ ಗಳ ಕೊರತೆಯಾಗಿದೆ, ಇಂತಹ ಸುದ್ದಿಗಳನ್ನು ಪ್ರಸಾರ ಮಾಡುವ ಸಂಬಂದಪಟ್ಟ ವೈದ್ಯರನ್ನು ಸಂಪರ್ಕಿಸಿ ಅವರ ಅಭಿಪ್ರಾಯವನ್ನೂ ಸಹ ಪ್ರಸಾರ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಡಿಸಿ ವಿಷಾದ ವ್ಯಕ್ತಪಡಿಸಿದರು.

    ಜಿಲ್ಲೆಯಲ್ಲಿ ಅನಧಿಕೃತ ನ್ಯೂಸ್ ವೆಬ್‌ಸೈಟ್‌ಗಳು ಆರಂಭಗೊಂಡಿದ್ದು, ಸಾಮಾಜಿಕ ಸುದ್ದಿಗಳ ಸತ್ಯಾಸತ್ಯತೆ ಪರಾಮರ್ಶೆ ಮಾಡದೇ ಹರಿ ಬಿಡಲಾಗುತ್ತಿದ್ದು, ಇದರಿಂದ ಸರಕಾರದ, ಗಣ್ಯರ, ಜನಪ್ರತಿನಿಧಿಗಳ, ಸಂಘ ಸಂಸ್ಥೆಗಳ, ನಾಗರೀಕರ ತೇಜೋವಧೆಯ ಜೊತೆಗೆ ಧಾರ್ಮಿಕ , ಸಾಮಾಜಿಕ ಭಾವನೆಗಳಿಗೆ ಧಕ್ಕೆ ಮೂಡಿಸುವಂತಹ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಇಂತಹ ಅನಧಿಕೃತ ನ್ಯೂಸ್ ವೆಬ್‌ಸೈಟ್ ಗಳನ್ನು ನಿಷೇಧಿಸುವಂತೆ ಮನವಿ ಬಂದಿದೆ. ಈ ರೀತಿ ನ್ಯೂಸ್ ವೆಬ್‌ಸೈಟ್ ಮಾಡಿಕೊಂಡು ಸಾರ್ವಜನಿಕ ಸುದ್ದಿ ಪ್ರಕಟಿಸಲು ಅನುಮತಿ ಪಡೆದಿರುವ ಬಗ್ಗೆ ಸಂಬಂಧಪಟ್ಟ ವೆಬ್‌ಸೈಟ್ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.

    ಜಿಲ್ಲೆಯಲ್ಲಿನ ಸ್ಥಳೀಯ ಕೇಬಲ್ ಟಿವಿ ಗಳು ಸಹ ಮನರಂಜನೆ ಹೊರತುಪಡಿಸಿ, ನ್ಯೂಸ್ ಪ್ರಸಾರ ಮಾಡಲು ಅನುಮತಿ ಪಡೆದಿರುವ ಬಗ್ಗೆ ಸಂಬಂದಪಟ್ಟ ಚಾನೆಲ್ ಗಳ ಮುಖ್ಯಸ್ಥರು ದಾಖಲೆಗಳನ್ನು ನೀಡುವಂತೆ ನೋಟೀಸ್ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

    Click here

    Click here

    Click here

    Call us

    Call us

    ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಕಾಯ್ದೆ ಉಲ್ಲಂಘಿಸಿದ್ದಲ್ಲಿ ಕೇಬಲ್ ಆಪರೇಟರ್ ಗಳ ಉಪಕರಣಗಳನ್ನು ವಶಪಡಿಸಿಕೊಳ್ಳುವ ಹಾಗೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದರು.

    ಜಿಲ್ಲೆಯಲ್ಲಿ ಕೇಬಲ್ ಟಿವಿ ಶುಲ್ಕ ಪಡೆಯುವ ಬಗ್ಗೆ ವ್ಯತ್ಯಾಸವಿದ್ದು, ಗ್ರಾಹಕರಿಂದ ಹೆಚ್ಚಿನ ದರ ಪಡೆಯುತ್ತಿದ್ದು, ಈ ಬಗ್ಗೆ ಪರಿಶೀಲಿಸುವಂತೆ ಸಮಿತಿಯ ಸದಸ್ಯೆ ತಾರಾ ತಿಮ್ಮಯ್ಯ ತಿಳಿಸಿದರು, ಹೆಚ್ಚಿನ ದರ ಪಡೆಯುವ ಬಗ್ಗೆ ಮತ್ತು ಕೇಬಲ್ ವಾಹಿನಿಗಳಲ್ಲಿ ಅನಪೇಕ್ಷಿತ ಕಾರ್ಯಕ್ರಮ ಪ್ರಸಾರವಾಗುತ್ತಿರುವ ಬಗ್ಗೆ, ಉಡುಪಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಆರಂಭಿಸಿರುವ ದೂರು ಕೋಶ (ದೂ.ಸಂ – 2985242, ಈ ಮೇಲ್, varthabhavanaudupi@gmail.com) ದಲ್ಲಿ ಸಾರ್ವಜನಿಕರು ಲಿಖಿತ ದೂರು ದಾಖಲಿಸುವಂತೆ ವಾರ್ತಾಧಿಕಾರಿ ಮಂಜುನಾಥ್ ಬಿ ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಡುಪಿ ಅಂಚೆ ವಿಭಾಗದ , ಸಹಾಯಕ ಅಂಚೆ ಅಧೀಕ್ಷಕ ಕೆ. ವಿ ಭಟ್, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಮನಃಶಾಸ್ತ್ರಜ್ಞ ವಿರೂಪಾಕ್ಷ ದೇವರಮನೆ, ವಿಶ್ವಾಸದ ಮನೆಯ ಫಾಸ್ಟರ್ ಸುನೀಲ್ ಜಾನ್ ಡಿಸೋಜಾ ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    04/07/2026

    ಮುಂಗಾರು ಹಂಗಾಮಿನಲ್ಲಿ ರೈತರಿಂದಲೇ ಬೆಳೆ ಸಮೀಕ್ಷೆಗೆ ಅವಕಾಶ

    04/07/2026

    ವಚನ ಸಾಹಿತ್ಯ ಉಳಿವಿಗೆ ಅವಿರತ ಶ್ರಮ ವಹಿಸಿದ ಫ.ಗು ಹಳಕಟ್ಟಿ: ಎಂ.ಎ ಗಫೂರ್

    03/07/2026
    Leave A Reply Cancel Reply

    11 − six =

    Call us

    Click Here

    Call us

    Call us

    Call us
    Highest Viewed Recently
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.