ಗಂಗೊಳ್ಳಿ: ಮಿನುಗಾರಿಕೆ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮದ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಗಂಗೊಳ್ಳಿ: ಗ್ರಾಮವಿಕಾಸ ಸಮಿತಿ ಗಂಗೊಳ್ಳಿ ಮತ್ತು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಇವರ ಆಶ್ರಯದಲ್ಲಿ ಗಂಗೊಳ್ಳಿಯಲ್ಲಿ ಆಯೋಜಿಸಲಾಗಿದ್ದ ಮೀನುಗಾರಿಕೆ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮದ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಜರಗಿತು.

Call us

Click Here

ಮುಖ್ಯ ಅತಿಥಿಯಾಗಿದ್ದ ಗ್ರಾಮವಿಕಾಸ ಸಮಿತಿ ಉಡುಪಿ ಜಿಲ್ಲೆಯ ಪ್ರಮುಖ ಪ್ರಮೋದ್ ಶೆಟ್ಟಿ ಮಾತನಾಡಿ, ಆತ್ಮನಿರ್ಭರ್ ಭಾರತ್ ಆಶಯದಂತೆ ಕೋವಿಡ್-19 ನಿಂದಾಗಿ ಪರ ಊರುಗಳಲ್ಲಿ ಉದ್ಯೋಗ ಕಳೆದುಕೊಂಡು ಊರಿಗೆ ಬಂದ ಉದ್ಯೋಗಾಕಾಂಕ್ಷಿಗಳಿಗಾಗಿ ಮತ್ತು ಆಸಕ್ತರಿಗೆ ಸ್ವ ಉದ್ಯೋಗದಲ್ಲಿ ತರಬೇತಿ ನೀಡಿ ಅವರಿಗೆ ಸ್ವಾವಲಂಬಿ ಜೀವನ ನಡೆಸಲು ಅವಕಾಶ ಮಾಡಿಕೊಡಲಾಗುವುದು. ಮೀನುಗಾರರಿಗೆ ಒಳನಾಡು ಹಾಗೂ ಕರಾವಳಿ ಮೀನುಗಾರಿಕೆ ಮತ್ತು ಮತ್ಸ್ಯೋದ್ಯಮದಲ್ಲಿ ಅವಕಾಶಗಳ ಬಗ್ಗೆ ಇಲಾಖಾ ಅಧಿಕಾರಿಗಳಿಂದ ಮತ್ತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಹೇಳಿದರು.

ಗಂಗೊಳ್ಳಿ ದಾಕುಹಿತ್ಲು ಶ್ರೀ ರಾಮ ಮಂದಿರ ಅಧ್ಯಕ್ಷ ಜಗನ್ನಾಥ ಪಟೇಲ್ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು. ತಾಲೂಕು ಸೇವಾ ಪ್ರಮುಖ್ ಶ್ರೀಧರ ಗಂಗೊಳ್ಳಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಂದಾಪುರ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯ ಸುಮಾರು 45 ಮಂದಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಕಾರ್ಯಕ್ರಮ ಸಂಘಟನಾ ಪ್ರಮುಖ್ ರಾಜೇಶ ಕಾವೇರಿ ಕುಂದಾಪುರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Click here

Click here

Click here

Click Here

Call us

Call us

Leave a Reply