ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 166ನೇ ಜನ್ಮ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ ಚ್ಯವನಪ್ರಾಶ, ಆಯುಷ್ ಕ್ವಾಥ ಚೂರ್ಣ ಮತ್ತು ರೋಗ ನಿರೋಧಕ ಮಾತ್ರೆಗಳ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಜರಗಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಂದಾಪುರದ ನ್ಯಾಯವಾದಿ ರವಿಕಿರಣ್ ಮುರ್ಡೇಶ್ವರ ಆಯುರ್ವೇದದಲ್ಲಿ ಅದ್ಭುತ ಶಕ್ತಿ ಇದೆ. ಗಿಡಮೂಲಿಕೆಗಳ ಮಹತ್ವವನ್ನು ಎಲ್ಲರೂ ಅರಿತುಕೊಂಡು ಯಾವುದೇ ದೇಹದ ಮತ್ತು ಆರೋಗ್ಯದ ಮೇಲೆ ಅಡ್ಡಪರಿಣಾಮ ಬೀರದ ಆಯುರ್ವೇದಿಕ್ ಔಷಧಿಗಳನ್ನು ಹೆಚ್ಚು ಉಪಯೋಗಿಸಬೇಕು ಎಂದು ಹೇಳಿದರು.
ಗಂಗೊಳ್ಳಿ ಬಿಲ್ಲವರ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಾನಂದ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಉಮೇಶ ಪುತ್ರನ್ ಆಯುಷ್ ಕಿಟ್ ವಿತರಿಸಿದರು. ಜಿಪಂ ಮಾಜಿ ಅಧ್ಯಕ್ಷ ಬಿ.ಎನ್.ಶಂಕರ ಪೂಜಾರಿ, ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ದೇವಾಡಿಗ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ, ಗಂಗೊಳ್ಳಿ ಜುಮ್ಮಾ ಮಸೀದಿ ಕಮಿಟಿ ಅಧ್ಯಕ್ಷ ಪಿ.ಎಚ್.ಹಸೈನಾರ್, ಗಂಗೊಳ್ಳಿ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಆನಂದ ಬಿಲ್ಲವ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಬೈಂದೂರು ವಲಯ ಅರಣ್ಯಾಧಿಕಾರಿ ಸದಾಶಿವ ಕೆ., ಗಂಗೊಳ್ಳಿ ರಾಮಕ್ಷತ್ರೀಯ ಸಂಘದ ಅಧ್ಯಕ್ಷ ಬಿ.ನಾಗೇಶ ಶೇರುಗಾರ್, ಉಪನ್ಯಾಸಕಿ ಶಾಲೆಟ್ ಲೋಬೊ, ಗಂಗೊಳ್ಳಿ ಬಿಲ್ಲವ ಯುವಕ ಸಂಘದ ಅಧ್ಯಕ್ಷ ಗೋಪಾಲ ಬಿಲ್ಲವ, ಬಿಲ್ಲವ ಮಹಿಳಾ ಘಟಕದ ಅಧ್ಯಕ್ಷೆ ವನಜಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆ ಆಯುಷ್ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷೆ ಡಾ.ವೀಣಾ ಕಾರಂತ್ ಆಯುಷ್ ಕಿಟ್ ಬಗ್ಗೆ ಮಾಹಿತಿ ನೀಡಿದರು. ವೈಷ್ಣವಿ ಗೋಪಾಲ್ ಗುರು ನಮನ ಸಲ್ಲಿಸಿದರು.
ದಿನಕರ ಪೂಜಾರಿ ಸ್ವಾಗತಿಸಿದರು. ಕೃಷ್ಣ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಪ್ರೇಮಾ ಸಿ. ಪೂಜಾರಿ ವಂದಿಸಿದರು.















