ಕುಂದಾಪುರ: ಜು.20ರಿಂದ 25ರವರೆಗೆ ಹಾಂಗ್‌ಕಾಂಗ್‌ನಲ್ಲಿ ನಡೆದ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಉಡುಪಿ ಜಿಲ್ಲೆಯ ಜಿ.ವಿ. ಅಶೋಕ್ ಮೂರು ಬೆಳ್ಳಿ ಪದಕವನ್ನು ಪಡೆದುಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಕೋಟದವರಾಗಿರುವ ಇವರು ಪ್ರಸ್ತುತ ಕೆನರಾ ಬ್ಯಾಂಕಿನ ಗಂಗೊಳ್ಳಿ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾಲಿಗ್ರಾಮದ ವೀರಮಾರುತಿ ವ್ಯಾಯಾಮ ಶಾಲೆಯಲ್ಲಿ ತರಬೇತಿ ಪಡೆಯುತ್ತಿರುವ ಇವರು ಅನೇಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.