ಕುಂದಾಪುರ: ಹತ್ರಾಸ್ ಪ್ರಕರಣದ ತನಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಮನಿಷಾ ಎಂಬ ಯುವತಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ, ಸೂಕ್ತ ತನಿಖೆಯೊಂದಿಗೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಂದಾಪುರ ವತಿಯಿಂದ ಕುಂದಾಪುರದ ಮಿನಿ ವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿತು.

Call us

Click Here

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಜ್ವಲ್ “ಯುವತಿಯ ಮೇಲೆ ನಡೆದ ಅಮಾನವೀಯ ಅತ್ಯಾಚಾರ ಪ್ರಕರಣವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಮಹಿಳೆಯರನ್ನು ಪೂಜಿಸುವ ಪರಂಪರೆಯನ್ನು ಹೊಂದಿರುವ ಜಗತ್ತಿನ ಶ್ರೇಷ್ಠ ದೇಶದಲ್ಲಿ ಇಂತಹ ಕ್ರೂರ ಘಟನೆಗಳು ನಡೆಯುತ್ತಿರುವುದು ಅತ್ಯಂತ ದುಃಖಕರ ಮತ್ತು ವಿಷಾದನೀಯ. ಯುವತಿಯು ಸಾವನ್ನಪ್ಪಲು ಕಾರಣರಾದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಎಬಿವಿಪಿ ಆಗ್ರಹಿಸುತ್ತದೆ” ಎಂದರು.

ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್ , ತಾಲೂಕಿನ ಕಾರ್ಯಕರ್ತರಾದ ನಿರಂಜನ್ , ದೀಪಕ್ , ಪ್ರಥ್ವಿಕ್ , ಪದ್ಮನಾಭ, ಅಭಿಷೇಕ್ , ಶಶಿಕಿರನ್ ಮುಂತಾದವರು ಉಪಸ್ಥಿರಿದ್ದರು.

Leave a Reply