ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಉಡುಪಿ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ಕೋಟ ರಾಮಕೃಷ್ಣ ಆಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಮಹಾಸಭಾದ ಕರಾವಳಿ ಜಿಲ್ಲೆಗಳ ಉಸ್ತುವಾರಿಯಾಗಿರುವ ಮಾಧ್ಯಮ ವಕ್ತಾರ ಮಾರುತಿ ಬಡಿಗೇರ್ ರಾಯಚೂರು ಮತ್ತು ರಾಜ್ಯ ಯುವ ಘಟಕದ ಅಧ್ಯಕ್ಷರಾದ ಮಳವಳ್ಳಿ ಶ್ರೀನಿವಾಸ್‌ಅವರ ಶಿಫಾರಸ್ಸಿನಂತೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಧ್ಯಕ್ಷರಾದ ವಿಧಾನ ಪರಿಷತ್‌ಸದಸ್ಯ ಕೆ. ಪಿ. ನಂಜುಂಡಿ ವಿಶ್ವಕರ್ಮ ಅವರು ನೇಮಕ ಮಾಡಿದ್ದಾರೆ.
ಸ್ಪೋಟ್ಸ್‌ಕನ್ನಡ ವೈಬ್‌ಸೈಟ್ ಸಂಸ್ಥಾಪಕರಾಗಿರುವ ಕ್ರೀಡಾಪಟು ರಾಮಕೃಷ್ಣ ಆಚಾರ್ಯ ಸಮಾಜಸೇವಕರಾಗಿ ಸಕ್ರೀಯರಾಗಿದ್ದಾರೆ.












