ಕುಂದಾಪುರ: ಕಲ್ಯಾಣಪುರದ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿದ 2015-16ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡವು ಪಡೆದುಕೊಂಡಿದೆ.
ವಿಜೇತ ತಂಡದ ವಿದ್ಯಾರ್ಥಿಗಳಾದ ಸಂಜನಾ, ಪ್ರಿಯಾಂಕಾ, ಅನುಶ್ರೀ ಹಾಗೂ ಸನ್ಮಿತಾ ಅವರು ಸ.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಸೇರುಗಾರ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಿ ಡಿ’ಕೋಸ್ತಾ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ರತ್ನಾಕರ ಶೆಟ್ಟಿ ಅವರೊಂದಿಗೆ. ವಿಜೇತ ವಿದ್ಯಾರ್ಥಿಗಳನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು ಅಭಿನಂದಿಸಿದ್ದಾರೆ.