ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಉಪಾಧ್ಯಕ್ಷರಾಗಿ ಕಿಶೋರ್ ಕುಮಾರ್ ಕುಂದಾಪುರ ಅವರನ್ನು ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರನ್ನು ನೇಮಕ ಮಾಡಿದ್ದಾರೆ.
ಕುಂದಾಪುರ ರೋಟರ‍್ಯಾಕ್ಟ್ ಕ್ಲಬ್‌ನ ಪೂರ್ವಾಧ್ಯಕ್ಷರಾಗಿ, ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷರಾಗಿ ಸಾಮಾಜಿಕ ಸಾಂಸ್ಕೃತಿಕ ವಲಯದಲ್ಲಿ ಗುರುತಿಸಿಕೊಂಡಿದ್ದ ಕಿಶೋರ್ ಅವರು ಭಾರತೀಯ ಜನತಾ ಪಾರ್ಟಿಯ ಮೂಲಕ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಿದ್ದರು.
ರಾಜ್ಯ ಬಿಜೆಪಿ ಮೀನುಗಾರಿಕಾ ಪ್ರಕೋಷ್ಠದ ಸಂಚಾಲಕರಾಗಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ ಅವರು, 2014ರಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿಯೂ ಸ್ವರ್ಧಿಸಿದ್ದರು.