ಕುಂದಾಪುರ, ಕಾರ್ಕಳ ತಾಲೂಕು ಆಸ್ಪತ್ರೆಗಳಲ್ಲಿ ತೆರವಾಗಿರುವ ಹುದ್ದೆ ಭರ್ತಿಗೆ ಅರ್ಜಿ- ಆಹ್ವಾನ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಾದ ತಾಲೂಕು ಆಸ್ಪತ್ರೆ ಕುಂದಾಪುರ ಹಾಗೂ ಕಾರ್ಕಳಕ್ಕೆ ಕೋವಿಡ್ ಹತೋಟಿ ಹಿನ್ನೆಲೆಯಲ್ಲಿ ತೆರವಾಗಿರುವ ಶುಶ್ರೂಷಕರ 29 ಹುದ್ದೆ, ಪ್ರಯೋಗಶಾಲಾ ತಂತ್ರಜ್ಞರ 45 ಹುದ್ದೆ ಹಾಗೂ ಗ್ರೂಪ್ ಡಿ. 29 ಹುದ್ದೆಗಳನ್ನು 6 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

Call us

Click Here

ಅರ್ಜಿಯನ್ನು ಅಕ್ಟೋಬರ್ 15 ರ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ, ಅಜ್ಜರಕಾಡು, ಉಡುಪಿ ಇವರಿಗೆ ಸಲ್ಲಿಸಿ, ಅಕ್ಟೋಬರ್ 19 ರಂದು ಬೆಳಗ್ಗೆ 10.30 ಕ್ಕೆ ನಡೆಯುವ ಸಂದರ್ಶನದಲ್ಲಿ ವಿದ್ಯಾರ್ಹತೆ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಪ್ರಕಟಣೆ ತಿಳಿಸಿದೆ.

ವಿವಿಧ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ವತಿಯಿಂದ ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿಯಿರುವ ಶುಶ್ರೂಷಕರು, ಎಲ್‍ಎಚ್‍ವಿ, ಡೆಂಟಲ್ ಹೈಜೆನಿಸ್ಟ್, ಎಮ್. ಬಿ. ಬಿ. ಎಸ್ ವೈದ್ಯಾಧಿಕಾರಿಗಳು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು, ಇನ್‍ಸ್ಟ್ರಾಕ್ಟರ್ ಫಾರ್‍ದ ಯಂಗ್ ಹಿಯರಿಂಗ್ ಇಂಪಾಯರ್ಡ್ ಚಿಲ್ಡ್ರನ್ ಹಾಗೂ ಆರ್. ಎಮ್. ಎನ್. ಸಿ. ಎಚ್+ಎ ಕೌನ್ಸಿಲರ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅಕ್ಟೋಬರ್ 16 ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಉಡುಪಿ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಅಭ್ಯರ್ಥಿಗಳು ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಹಾಜರಾಗುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Leave a Reply