ಡಾ. ಎಸ್. ಎಲ್. ಭೈರಪ್ಪರಿಗೆ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಮೈಸೂರಿನ ಪ್ರಮತಿ ಶಾಲೆಯಲ್ಲಿ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾ. ಪಂ. ಡಾ. ಶಿವರಾಮ ಕಾರಂತ ಟ್ರಸ್ಟ್ ಆಶ್ರಯದಲ್ಲಿ ನಡೆದ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು

Call us

Click Here

ಹುಟ್ಟೂರ ಪ್ರಶಸ್ತಿ ಸ್ವೀಕರಿಸಿ ಎಸ್. ಎಲ್. ಭೈರಪ್ಪ ಮಾತನಾಡಿ, ಡಾ. ಕೋಟ ಶಿವರಾಮ ಕಾರಂತರು ಕೇವಲ ಓರ್ವ ಸಾಹಿತಿಯಲ್ಲ, ತನ್ನ ಜೀವನ ಹಾಗೂ ಸಾಹಿತ್ಯ ಕೃತಿಗಳ ಮೂಲಕ ಸಮಾಜದಲ್ಲಿ ಕ್ರಾಂತಿಕಾರಿ ಸುಧಾರಣೆಯನ್ನು ತಂದ ಸಮಾಜ ಸುಧಾರಕ ಸಾಹಿತಿ ಕಾರಂತರು ಈ ನೆಲದ ಸಾಕ್ಷಿ ಪ್ರಜ್ಞೆ. ಅವರ ಮೂಲಕವಾಗಿ ಅವಿಭಜಿತ ದ. ಕ. ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು ಅವು ಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕಾರಂತರ ಹೆಸರಲ್ಲಿ ಪ್ರಶಸ್ತಿ ಸ್ವೀಕರಿಸುವುದು ನನ್ನ ಪಾಲಿನ ಭಾಗ್ಯ ಎಂದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ . ಟಿ. ಸೋಮಶೇಖರ್ ಪ್ರಶಸ್ತಿ ಪ್ರದಾನ ಮಾಡಿದರು

ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಭೈರಪ್ಪ ಅವರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಿರುವುದು ಬಹಳ ಸಂತಸ ಉಂಟು ಮಾಡಿದೆ ಎಂದರು.

ಮೈಸೂರು ಸಂಸದ ಪ್ರತಾಪಸಿಂಹ, ಶಾಸಕ ಎಲ್. ನಾಗೇಂದ್ರ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜು, ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯ ಯು. ಎಸ್. ಶೆಣೆ„, ಟ್ರಸ್ಟ್‌ನ ಸದಸ್ಯ ಮಣೂರು ಸುಬ್ರಾಯ ಆಚಾರ್ಯ, ಕೋಟತಟ್ಟು ಗ್ರಾ. ಪಂ. ಆಡಳಿತಾಧಿಕಾರಿ ಡಾ. ಅರುಣ್ ಕುಮಾರ್ ಉಪಸ್ಥಿತರಿದ್ದರು.

Click here

Click here

Click here

Click Here

Call us

Call us

Leave a Reply