ಕಾರಂತರ ಕಾದಂಬರಿಯ ಪಾತ್ರಗಳು ಪ್ರಸ್ತುತ ಸಮಾಜದ ಕೈಗನ್ನಡಿ: ಶಿವಪ್ರಸಾದ್ ಶೆಟ್ಟಿಗಾರ್

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ:  ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಟ್ರಸ್ಟ್ ಉಡುಪಿ, ಯು – ಚಾನೆಲ್ ಸಹಯೋಗದಲ್ಲಿ ನಡೆಯುತ್ತಿರುವ ಡಾ. ಶಿವರಾಮ ಕಾರಂತ ಜನ್ಮ ದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 16ನೇ ವರ್ಷದ ಸಂಭ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯಿಕ – ಸಾಂಸ್ಕೃತಿಕ ಸುಗ್ಗಿ ಆಲ್ಮೋರ – 2020 ಮರೆಯಲಾಗದ ಶಬ್ಧತೀರ ಕಾರ್ಯಕ್ರಮದಲ್ಲಿ ನಾಲ್ಕನೇ ದಿನದ ಕಾರಂತ ಚಿಂತನ ಮಂತನ ಕಾರ್ಯಕ್ರಮ ನಡೆಯಿತು

Call us

Click Here

ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಅಧ್ಯಾಪಕ ಶಿವಪ್ರಸಾದ್ ಶೆಟ್ಟಿಗಾರ್ ಮಾತನಾಡಿ, ಡಾ. ಶಿವರಾಮ ಕಾರಂತರ ಕಾದಂಬರಿಯಲ್ಲಿ ಬರುವ ಪಾತ್ರಗಳು ಸನ್ನಿವೇಶಗಳು ಪ್ರಸ್ತುತ ಸಮಾಜದಲ್ಲಿ ನಡೆಯುತ್ತಿರುವ ವಿದ್ಯಾಮಾನಗಳನ್ನು ಎತ್ತಿ ಹಿಡಿಯುವ ಕೈಗನ್ನಡಿಯಾಗಿದ್ದು, ಕಾರಂತರ ಕಾದಂಬರಿಯಲ್ಲಿ ಮನುಷ್ಯ ಹಾಗೂ ಪರಿಸರದ ನಡುವೆ ಇರುವ ಸಂಬಂಧವನ್ನು ತುಂಬಾ ಸುಂದರವಾಗಿ ಹೆಣೆದಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ನಿರೂಪಿಸಿ ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ಕೋಟತಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶೈಲಜಾ ಕೆ. ಎನ್ ಅವರು ವಂದಿಸಿದರು.

Leave a Reply