ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಅ.25ರ ವರೆಗೆ ನವರಾತ್ರಿ ಉತ್ಸವ ಜರುಗಲಿದ್ದು, ಸಾರ್ವಜನಿಕರ ಮತ್ತು ಕರ್ತವ್ಯ ನಿರತ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ದೇವಾಲಯದಲ್ಲಿ ಅನುಷ್ಟಾನಗೊಳಿಸುವ ಸಲುವಾಗಿ ಅ.24ರ ಮಹಾನವಮಿಯಂದು ನಡೆಯಲಿರುವ ರಥೋತ್ಸವವನ್ನು ದೇವಸ್ಥಾನದ ಆವರಣದ ಒಳಗೆ ದೇವಸ್ಥಾನದ ಅರ್ಚಕರು, ಪುರೋಹಿತರು, ಸಿಬ್ಬಂದಿಗಳು ಮಾತ್ರ ನೆರವೇರಿಸಲಿದ್ದಾರೆ.
ಅ.25ರ ವಿಜಯದಶಮಿ ದಿನದಂದು ಬೆಳಗ್ಗೆ 4 ಗಂಟೆಯಿಂದ ವಿದ್ಯಾರಂಭ ಪ್ರಾರಂಭವಾಗಲಿದ್ದು, ವಿದ್ಯಾರಂಭಕ್ಕೆ ದಂಪತಿ ಸಮೇತ ಮಗುವಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.