ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ವ್ಯವಹಾರ ನಿರ್ವಹಣಾ ವಿಭಾಗ ಹಾಗೂ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ಸಹಯೋಗದಲ್ಲಿ ಉದಯೋನ್ಮುಖ ಹಣಕಾಸು ಯೋಜನೆಗಾಗಿ ಹಣಕಾಸು ಮಂತ್ರ ಇದರ ಕುರಿತು ಒಂದು ದಿನದ ರಾಜ್ಯಮಟ್ಟದ ವೆಬಿನಾರ್ ನಡೆಯಿತು.
ಸಂಪನ್ಮೂಲ ವ್ಯಕ್ತಿ ಡಾ. ಶರಣ್ ಕುಮಾರ್ ಶೆಟ್ಟಿ, ಸಹಾಯಕ ಪ್ರಾಧ್ಯಾಪಕರು, ಎಮ್. ಎಸ್. ಎನ್. ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಮಂಗಳೂರು, ವರ್ತಮಾನದ ವ್ಯಾವಹಾರಿಕ ತುರ್ತಿನ ಈ ಸಂದರ್ಭ ಅಗತ್ಯವುಳ್ಳ ಯೋಜಿತ ಹಣಕಾಸು ವ್ಯಯಿಸುವಿಕೆ ಹಾಗೂ ನಿರ್ವಹಣೆಯ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಐಕ್ಯೂಎಸಿ ಸಂಯೋಜಕಿ ಸ್ಫೂರ್ತಿ ಎಸ್. ಫೆರ್ನಾಂಡಿಸ್ ಉಪಸ್ಥಿತರಿದ್ದರು. ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ನಂದಾ ರೈ ಸ್ವಾಗತಿಸಿ, ನಿರೂಪಿಸಿದರು. ಉಪನ್ಯಾಸಕಿ ಅವಿತಾ ಕೊರೆಯಾ ವಂದಿಸಿದರು.