ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಆಶ್ರಯದಲ್ಲಿ ಶಾರದಾ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ದೀಪ ಪ್ರಜ್ವಲಿಸಿ, ಶಾರದೆಗೆ ಪುಷ್ಪಾರ್ಚನೆ ಸಲ್ಲಿಸಿದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಸಂಸ್ಕೃತ ವಿಭಾಗದ ಪ್ರಾಧ್ಯಾಪಕಿ ಸುದಕ್ಷಿಣಾ ಎ. ಎಸ್. ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಬೋಧಕ – ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.