ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಮುಕ್ತ ಪ್ರಕಟಣಾ ಮಾಲೆ ಹೆಸರಿನಲ್ಲಿ ಅಪ್ರಕಟಿತ ಕೃತಿಗಳನ್ನು ಪ್ರಕಟಣೆಗಾಗಿ ಆಹ್ವಾನಿಸಲಾಗಿದೆ.
ಆಸಕ್ತ ಲೇಖಕರು ಸಂಶೋಧನೆ, ವಿಮರ್ಶೆ, ಜೀವನ ಚರಿತ್ರೆ, ಆತ್ಮಕತೆ, ನಿಘಂಟು, ಈವರೆಗೆ ಬಾರದೇ ಇರುವ ಜ್ಞಾನ ಶಾಖೆಯ ಬಗ್ಗೆ ಪ್ರಕಟವಾಗಬಹುದಾದ ಜ್ಞಾನನಿಧಿ ಎನಿಸಬಹುದಾದ ಶಾಸ್ತ್ರ ಜ್ಞಾನ ಹೆಚ್ಚಿಸುವ ವಿಶೇಷ ಕೃತಿಗಳು ಪ್ರಕಟಣೆಗೆ ಸಿದ್ಧವಿದ್ದಲ್ಲಿ ಕೃತಿಗಳನ್ನು ಅಕಾಡೆಮಿಯ ವಿಳಾಸಕ್ಕೆ ಕಳುಹಿಸಬಹುದು.
ಹೆಚ್ಚಿನ ವಿವರಗಳಿಗೆ ಅಕಾಡೆಮಿಯ ವೆಬ್‍ಸೈಟ್ http://karnatakasahithyaacademy.org/ ಸಂಪರ್ಕಿಸುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.