ಕಪಿಲೆ ಗೋಸಮೃದ್ಧಿ ಟ್ರಸ್ಟ್‌ಗೆ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಿಧ್ಯಾರ್ಥಿಗಳು ಭೇಟಿ

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಬೀಜಾಡಿಯ ಕಪಿಲೆ ಗೋಸಮೃದ್ಧಿ ಟ್ರಸ್ಟ್‌ಗೆ ವಿದ್ಯಾರ್ಥಿಗಳು ಭೇಟಿ ನೀಡಿದರು.

Call us

Click Here

ಈ ಸಂದರ್ಭದಲ್ಲಿ ಟ್ರಸ್ಟ್‌ನ ಪ್ರವರ್ತಕ ಕುಮಾರ್ ಕೆ. ಕಾಂಚನ್ ಅವರು ದೇಸಿ ಗೋತಳಿಗಳು ಮತ್ತು ಅದರ ಉತ್ಪನ್ನಗಳ ಮಹತ್ವದ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಿಗೆ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಸಗಣಿಯಿಂದ ಹಣತೆ, ದೂಪದ ಬತ್ತಿ ತಯಾರಿಕೆ ಹಾಗೂ ಗೋವುಗಳ ಆರೈಕೆಯ ಕುರಿತು ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿಭಾಗದ ಮುಖ್ಯಸ್ಥ ಹಾಗೂ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಎನ್. ಎಸ್. ಎಸ್. ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ. ವಿಭಾಗದ ಪ್ರಾಧ್ಯಾಪಕರಾದ ಸುಕುಮಾರ್ ಶೆಟ್ಟಿ, ಪ್ರವೀಣಾ ಮಹಾಬಲ ಪೂಜಾರಿ ಹಾಗೂ ಕಛೇರಿ ಸಿಬ್ಬಂದಿ ಶರತ್ ಖಾರ್ವಿ ಉಪಸ್ಥಿತರಿದ್ದರು. ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು

Leave a Reply