ಡಿಸಿ ಮನ್ನಾ ಭೂಮಿ ಗುರುತಿಸಿ ಮಾಹಿತಿ ನೀಡಿ: ದಿನಕರ ಬಾಬು

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:  ಡಿಸಿ ಮನ್ನಾ ಭೂಮಿಯನ್ನು ಆದಷ್ಟು ಶೀಘ್ರದಲ್ಲಿ ಗುರುತಿಸಿ ನಿಖರವಾದ ಅಂಕಿ ಅಂಶಗಳೊಂದಿಗೆ ಮುಂದಿನ ಕುಂದು ಕೊರತೆ ಸಭೆಗೆ ಮಾಹಿತಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಕಂದಾಯ ಇಲಾಖಾಧಿಕಾರಿಯವರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ತಿಳಿಸಿದರು.

Call us

Click Here

ಅವರು ಕುಂದಾಪುರ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ ನಡೆದ, ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ, 1989 ನಿಯಮ 995 ತಿದ್ದುಪಡಿ ನಿಯಮಗಳು 2013ರಂತೆ ನಿಯಮ 17 ಎ ಪ್ರಕಾರ ಕಂದಾಯ ಉಪವಿಭಾಗ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಸರ್ಕಾರದ ನಿಯಮಾವಳಿಯಂತೆ ಡಿಸಿ ಮನ್ನಾ ಭೂಮಿಯನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿತರಿಸಲು ಆದಷ್ಟು ಶೀಘ್ರದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು ಎಂದ ದಿನಕರ ಬಾಬು, ಪ್ರತೀ ದಲಿತ ಕಾಲೋನಿಗಳಲ್ಲಿ ಪೊಲೀಸ್ ಸಭೆಗಳನ್ನು ಔಚಿತ್ಯ ಪೂರ್ಣವಾಗಿ ಏರ್ಪಡಿಸಬೇಕು ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ವಿವಿಧ ಇಲಾಖೆಗಳಡಿ ಸ್ವ ಉದ್ಯೋಗ ಕೈಗೊಳ್ಳುವ ಸಂಬಂಧ ಕೊಡಮಾಡುವ ಬ್ಯಾಂಕ್ ಸಬ್ಸಿಡಿ ಸಾಲ ಸೌಲಭ್ಯ ಪಡೆಯಲು ಬ್ಯಾಂಕಿನ ವ್ಯವಸ್ಥಾಪಕರುಗಳು ವಿನಾ ಕಾರಣ ಆಕ್ಷೇಪಿಸುತ್ತಿದ್ದು, ಈ ರೀತಿ ಆಕ್ಷೇಪಿಸುವ ಬ್ಯಾಂಕ್ ವ್ಯವಸ್ಥಾಪಕರುಗಳ ಮೇಲೆ ಸೂಕ್ತ ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಕೆ. ರಾಜು ಮತ್ತಿತರರು ಉಪಸ್ಥಿತರಿದ್ದರು.

Leave a Reply