ಗ್ರಾಮಾಭಿವೃದ್ಧಿಯಲ್ಲಿ ರಸ್ತೆಗಳ ಪಾತ್ರ ಹಿರಿದು: ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ₹50 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಹೊಂದಲಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ತ್ರಾಸಿ ಗ್ರಾಮ ಪಂಚಾಯಿತಿಯ ಕಲ್ಲಾನಿ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಿಂಭಾಗದಿಂದ ಬೇಲೆಬದಿಗೆ ಹೋಗುವ ರಸ್ತೆ ಕಾಮಗಾರಿಗೆ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಚಾಲನೆ ನೀಡಿದರು.

Call us

Click Here

ಚಾಲನೆ ನೀಡಿ ಮಾತನಾಡಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ರಸ್ತೆಗಳು ಊರಿನ ಜೀವನಾಡಿಯಿದ್ದಂತೆ. ಊರಿನ ವಿವಿಧ ರಂಗಗಳ ಅಭಿವೃದ್ಧಿಯಲ್ಲಿ ಉತ್ತಮ ರಸ್ತೆಗಳು ಪ್ರಮುಖ ಪಾತ್ರ ವಹಿಸುತ್ತವೆ ರಾಜ್ಯ ಸರ್ಕಾರ ರಸ್ತೆ ನಿರ್ಮಾಣ, ದುರಸ್ತಿ ಮತ್ತು ಉನ್ನತೀಕರಣಕ್ಕೆ ಆದ್ಯತೆ ನೀಡುತ್ತಿದೆ. ಈ ವಿಚಾರದಲ್ಲಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಿಗೂ ಆದ್ಯತೆ ನೀಡಲಾಗುತ್ತಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಶೋಭಾ. ಜಿ ಪುತ್ರನ್, ರಾಜ್ಯ ಯೋಜನಾ ಮಂಡಳಿ ಸದಸ್ಯೆ ಪ್ರಿಯದರ್ಶಿನಿ ಬೆಸ್ಕೂರ್, ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ. ತ್ರಾಸಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಿಥುನ್ ದೇವಾಡಿಗ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಶಾರದಾ ಬಿಜೂರು ಇದ್ದರು.

Leave a Reply