ಕಾರಂತರನ್ನು ಮುಂದಿನ ಜನಾಂಗಕ್ಕೆ ಪರಿಚಯಿಸುವ ಹೊಣೆಗಾರಿಕೆ ನಮ್ಮ ಮೇಲಿದೆ: ಗೋಪಾಲ ನಾಯರಿ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಬಂದರು ಇಲಾಖೆಯ ಜಂಟಿ ನಿರ್ದೇಶಕ ಗೋಪಾಲ್ ನಾಯರಿ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲರ್ಪಣೆ ಮಾಡಿ, ರಂಗ ಮಂದಿರ, ಆರ್ಟ್ ಗ್ಯಾಲರಿ ಗ್ರಂಥಾಲಯ ವೀಕ್ಷಿಸಿದರು

Call us

Click Here

ವೀಕ್ಷಿಸಿ ಮಾತನಾಡಿದ ಬಂದರು ಇಲಾಖೆಯ ಜಂಟಿ ನಿರ್ದೇಶಕ ಗೋಪಾಲ್ ನಾಯರಿ, ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ಜೊತೆಗೆ ಹಲವಾರು ಪ್ರಶಸ್ತಿಗಳನ್ನು ಪಡೆದು ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ ಕಾರಂತರದ್ದು ಎಲ್ಲಾರಿಗೂ ಮಾದರಿಯಾದ ಬದುಕು, ಇದನ್ನು ಮುಂದಿನ ಜನಾಂಗಕ್ಕೆ ತಲುಪಿಸುವ ಜವಬ್ದಾರಿ ನಮ್ಮ ಮೇಲಿದೆ, ಈ ನಿಟ್ಟಿನಲ್ಲಿ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಶ್ಲಾಘನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇದರ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಟ್ರಸ್ಟಿ ಸುಬ್ರಾಯ್ ಆಚಾರ್ಯ, ಉಡುಪಿ ಜಿಲ್ಲೆಯ ಬಂದರು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಾಂತಕರಾದ ಉದಯ ಕುಮಾರ್, ದ.ಕ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ, ಸ್ಥಳೀಯರಾದ ರಾಜೇಂದ್ರ ಸುವರ್ಣ ಹಾಗೂ ಥೀಮ್ ಪಾರ್ಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply