ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೊಚ್ಚಕ್ಕಿ ಕುಡಿಗಳು ಕುಂದಾಪ್ರ ಕನ್ನಡದ ಸಾಮಾಜಿಕ ಜಾಲತಾಣ ಬಳಗ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಕುಂದಗನ್ನಡ ಕವನ ರಚನಾ ಸ್ಪರ್ಧೆಯಲ್ಲಿ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಇವರು ರಚಿಸಿದ ‘ನಮ್ ಭಾಷಿ ನಮ್ ಗತ್’ ಎನ್ನುವ ಕವನ ಈ ಗೌರವಕ್ಕೆ ಪಾತ್ರವಾಗಿದೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.