ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ವಿದ್ಯಾಗಿರಿ, ಇದರ ಆಶ್ರಯದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ಒಂದು ದಿನದ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರವನ್ನು ಮಂಗಳವಾರ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆಯಿತು.
ಕಾರ‍್ಯಕ್ರಮದಲ್ಲಿ ಆಳ್ವಾಸ್ ಆಯುರ್ವೇದ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಪೋಸ್ಟ್ ಕೋವಿಡ್ ಕೇರ್ ಸೆಂಟರ್‌ನ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿರ್ತಾಡಿಯ ಖ್ಯಾತ ವೈದ್ಯಕೀಯ ತಜ್ಞರಾದ ಡಾ. ಕೃಷ್ಣರಾಜ್ ಭಟ್‌ರವರು ನೆರವೇರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಳ್ವಾಸ್ ಹೆಲ್ತ್ ಸೆಂಟರ್ ಆಡಳಿತ ನಿರ್ದೇಶಕ ಡಾ.ವಿನಯ್ ಆಳ್ವ ವಹಿಸಿದರು.
ಈ ವೈದ್ಯಕೀಯ ಶಿಬಿರದಲ್ಲಿ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಆಳ್ವಾಸ್ ಆಯುರ್ವೇದ ಆಸ್ಪತ್ರೆಯ ತಜ್ಞ ವೈದ್ಯರು ಉಚಿತ ತಪಾಸಣೆ, ಚಿಕಿತ್ಸೆ ಹಾಗೂ ಸೂಕ್ತ ಸಲಹೆಯನ್ನು ಸಾರ್ವಜನಿಕರಿಗೆ ನೀಡಿದರು. ಈ ಶಿಬಿರದಲ್ಲಿ ರಕ್ತದಲ್ಲಿನ ಸಕ್ಕರೆ ಅಂಶ ಹಾಗೂ ರಕ್ತದೋತ್ತಡದ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಯಿತು. ಸುಮಾರು200 ಕ್ಕೂ ಅಧಿಕ ಸಾರ್ವಜನಿಕರು ಈ ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಕಾರ‍್ಯಕ್ರಮದಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಝೆನಿಕಾ ಡಿಸೋಕ ಶಿಬಿರದ ಬಗ್ಗೆ ಸೂಕ್ತ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮ ಸಂಯೋಜಕ ಹಾಗೂ ಆಳ್ವಾಸ್ ಆಯುರ್ವೇದ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಮಂಜುನಾಥ ಭಟ್ ಉಪಸ್ಥಿತರಿದ್ದರು.