ಕುಂದಾಪುರ: ಮೊಗವೀರ ಯುವ ಸಂಘಟನೆ ಬಡವರ ನೋವಿಗೆ ಸ್ಪಂದಿಸುವುದರೊಂದಿಗೆ ಜನಪರ ಕಾಳಜಿಯಿಂದ ಕಾರ್ಯನಿರ್ವಹಿಸಬೇಕು, ಸಮಾಜ ಬಾಂಧವರ ಬದುಕಿಗೆ ಆಶಾಕಿರಣವಾಗಿರಬೇಕು ಎಂದು ನಾಡೋಜ ಪ್ರಶಸ್ತಿ ಪುರಸ್ಕೃತ ಉಡುಪಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ| ಜಿ. ಶಂಕರ್ ಹೇಳಿದರು.
ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕದ “ದಶಮೋತ್ಸವ – 2015′ ಹಾಗೂ 10ನೇ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಕ್ಯಾನ್ಸರ್, ಹೃದಯ ರೋಗ, ಕಿಡ್ನಿ ವೈಫಲ್ಯ ಮುಂತಾದ ರೋಗಗಳಿಗೆ 50,000 ರೂ. ಧನ ಸಹಾಯ ಆರೋಗ್ಯ ಕಾರ್ಡ್‌ನಲ್ಲಿ ನೀಡುವ ಬಗ್ಗೆ ಮಾತುಕತೆ ನಡೆದಿದೆ. ಅದರೊಡನೆ ಮಣಿಪಾಲ ಆಸ್ಪತ್ರೆ ಹಾಗೂ ಜಿಲ್ಲಾಡಳಿದ ಸಹಕಾರದೊಡನೆ ಉಡುಪಿ ಜಿಲ್ಲೆಯನ್ನು ರಕ್ತ ದಾನಿಗಳ ಜಿಲ್ಲೆಯಾಗಿಸುವುದಾಗಿ ಹೇಳಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೇಶ್ವರ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಅಶೋಕ್ ತೆಕ್ಕಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಮುಂಬಯಿ ಉದ್ಯಮಿಗಳಾದ ಸುರೇಶ್ ಆರ್. ಕಾಂಚನ್, ಗೋಪಾಲ ಎಸ್. ಪುತ್ರನ್, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ದಯಾನಂದ ಬಳ್ಕೂರು, ಜಿ.ಪಂ. ಸದಸ್ಯ ಗಣಪತಿ ಶ್ರೀಯಾನ್, ಬಗ್ವಾಡಿ ಮೊಗವೀರ ಮಹಾಜನ ಸೇವಾ ಸಂಘದ ಅಧ್ಯಕ್ಷ ಎಂ.ಎಂ…. ಸುವರ್ಣ, ಬೆಂಗಳೂರು ಮೊಗವೀರ ಸಂಘದ ಅಧ್ಯಕ್ಷ ನರಸಿಂಹ ಬೀಜಾಡಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ, ಮುಂಬಯಿ ಅಧ್ಯಕ್ಷ ಮಹಾಬಲ ಎಂ. ಕುಂದರ್ ಕೆಎಫ್‌ಡಿಸಿ ಅಧ್ಯಕ್ಷ ಬಿ. ಹಿರಿಯಣ್ಣ ಚಾತ್ರಬೆಟ್ಟು, ಉದ್ಯಮಿ ಕೆ.ಕೆ. ಕಾಂಚನ್, ಮೊಗವೀರ ಯುವ ಸಂಘಟನೆಯ ಮಾಜಿ ಜಿಲ್ಲಾಧ್ಯಕ್ಷ ಜಯ ಸಿ. ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಕೆದಿಯೂರು, ಉದ್ಯಮಿ ಎನ್.ಡಿ. ಚಂದನ್, ರಾಜು ಮೆಂಡನ್ ಅವರು ಕೋಟೇಶ್ವರ ಮೊಗವೀರ ಯುವ ಸಂಘಟನೆಯ 10 ವರುಷದ ಸಾಧನೆಯನ್ನು ಶ್ಲಾಘಿಸಿದರು.
ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಮಹಿಳಾ ಘಟಕದ ಅಧ್ಯಕ್ಷೆ ಹೇಮಾ ತೆಕ್ಕಟ್ಟೆ ಸ್ವಾಗತಿಸಿದರು. ಕಾರ್ಯದರ್ಶಿ ನಾಗರಾಜ ಬೀಜಾಡಿ ವರದಿ ಮಂಡಿಸಿದರು. ಕೋಟೇಶ್ವರ ಮೊಗವೀರ ಯುವ ಸಂಘಟನೆಯ ಗೌರವಾಧ್ಯಕ್ಷ ಸತೀಶ್ ಎಂ. ನಾಯ್ಕ ಪ್ರಸ್ತಾವನೆಗೈದರು. ಕಾರ್ಯದರ್ಶಿ ನಾಗರಾಜ ಬೀಜಾಡಿ ವಂದಿಸಿದರು. ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆಯ ಉಪಾಧ್ಯಕ್ಷ ಗಣೇಶ್ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು.