ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಚಿತ್ತೂರು ಗ್ರಾಮ ಪಂಚಾಯತ್ ಸಮೀಪ ರಸ್ತೆ ಅಪಘಾತ ಸಂಭವಿಸಿ ಮಣಿಪಾಲ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿತ್ತೂರು ಶಂಕರ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಸಾರ್ವಜನಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿರುವ ಶಂಕರ ಶೆಟ್ಟಿಯವರು ಚಿತ್ತೂರು ಗಣೇಶೋತ್ಸವ ಸಮಿತಿ, ಚಿತ್ತೂರು ಪ್ರೌಢಶಾಲಾ ಮೇಲುಸ್ತುವಾರಿ ಸಮಿತಿಯಲ್ಲಿ ಈ ಹಿಂದೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿರುತ್ತಾರೆ.