ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಭರತ್ ಶೆಟ್ಟಿ ಇವರು ಈಚೆಗೆ ದಾವಣಗೆರೆಯಲ್ಲಿ ನಡೆದ ಗ್ರಾಮ ಲೆಕ್ಕಿಗರ ರಾಜ್ಯ ಸಮಾವೇಶದಲ್ಲಿ ರಾಜ್ಯ ಗ್ರಾಮ ಲೆಕ್ಕಿಗರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.
ಉಡುಪಿ ಜಿಲ್ಲಾ ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿರುವ ಇವರನ್ನು ಈ ಸಮಾವೇಶದಲ್ಲಿ ಗೌರವಿಸಲಾಯಿತು.
ರಾಜ್ಯ ಸಂಘಟನೆಯ ಅಧ್ಯಕ್ಷ ಬಿ. ದೊಡ್ಡಬಸಪ್ಪ ರೆಡ್ಡಿ, ಗೌರವಾಧ್ಯಕ್ಷ ಚಂದ್ರಶೇಖರ ಉಟಕೂರು, ಉಪಾಧ್ಯಕ್ಷರಾದ ಗುರುಮೂರ್ತಿ ಎಸ್. ಸಿ, ಮುರಳಿಧರ್, ರಮೇಶ್, ಶೈಲಜಾ ಕೆ. ಎಸ್, ಪ್ರಧಾನ ಕಾರ್ಯದರ್ಶಿ ನಾಗೇಶ್ ಹಾಗೂ ಖಜಾಂಜಿ ಎ. ಎಂ. ಲೋಹಿತ್ ಇದ್ದರು.