ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥದಾರಿ ವಾಸುದೇವ ಸಾಮಗ ಇನ್ನಿಲ್ಲ

Click Here

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಿರಿಯ ಯಕ್ಷಗಾನ ಕಲಾವಿದ, ತಾಳಮದ್ದಳೆ ಅರ್ಥದಾರಿ, ಸಂಘಟಕರಾದ ಮಲ್ಪೆ ವಾಸುದೇವ ಸಾಮಗ ಅವರು ಅಲ್ಪ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಶನಿವಾರ ಬೆಳಿಗ್ಗೆ ಕೋಟೇಶ್ವರದ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

Call us

Click Here

ಯಕ್ಷಗಾನ ಕ್ಷೇತ್ರದಲ್ಲಿ ತನ್ನ ವಾಕ್ಪಟುತ್ವದಿಂದ ಹೆಸರು ಗಳಿಸಿದ್ದ ವಾಸುದೇವ ಸಾಮಗ (72) ಅವರು ಕುಂದಾಪುರದ ಕೋಟೇಶ್ವರದಲ್ಲಿ ನೆಲೆಸಿದ್ದರು. ತೆಂಕು-ಬಡಗು ತಿಟ್ಟಿನ ಸವ್ಯಸಾಚಿ ಕಲಾವಿದರೆಂದು ಗುರುತಿಸಲ್ಪಟ್ಟ ವಾಸುದೇವ ಸಾಮಗರ ತಂದೆ ಮತ್ತು ದೊಡ್ಡಪ್ಪ ಆಗಿನ ಮಹಾನ್ ಕಲಾವಿದರು ಮತ್ತು ಹರಿದಾಸರಾದ ಕಾರಣ ಇವರು ಸಹಜವಾಗಿಯೇ ಯಕ್ಷಗಾನದ ಒಲವು ಹೊಂದಿದ್ದರು. ಕೋಟ ಶ್ರೀಧರ ಹಂದೆಯವರ ಒತ್ತಾಸೆಯ ಮೇರೆಗೆ ಪ್ರಥಮ ಬಾರಿಗೆ ದೊಡ್ಡ ಕೂಟದಲ್ಲಿ ಅರ್ಥದಾರಿಯಾಗಿ ಗಮನ ಸೆಳೆದು ಅವರದ್ದೇ ಯಜಮಾನಿಕೆಯ ಅಮೃತೇಶ್ವರಿ ಮೇಳದಲ್ಲಿ ವೃತ್ತಿರಂಗಕ್ಕೆ ಕಾಲಿಟ್ಟರು. ನಾರಣಪ್ಪ ಉಪ್ಪೂರರ ಒಡನಾಟದದಲ್ಲಿ ಪರಿಪೂರ್ಣ ಕಲಾವಿದರಾಗಿ ಆ ಮೇಳದಲ್ಲಿ ಗುರುತಿಸಿಕೊಂಡರು. ಅಲ್ಲಿ ದೊಡ್ಡ ಸಾಮಗರು, ಚಿಟ್ಟಾಣಿಯವರು, ಕೋಟ ವೈಕುಂಠ, ಎಂ.ಎ.ನಾಯಕ್, ನಗರ ಜಗನ್ನಾಥ ಶೆಟ್ಟಿ, ಗೋಡೆ ನಾರಾಯಣ ಹೆಗಡೆಯವರಂತ ಘಟಾನುಘಟಿಗಳ ಸಾಂಗತ್ಯ ದೊರೆಯಿತು. ಆಗ ಪ್ರದರ್ಶನಗೊಳ್ಳುತ್ತಿದ್ದ ಯಕ್ಷಲೋಕ ವಿಜಯ ಪ್ರಸಂಗದ ಪ್ರದೀಪನ ಪಾತ್ರ ಅವರಿಗೆ ಅಪಾರ ಜನಮನ್ನಣೆ ಗಳಿಸಿಕೊಟ್ಟಿತು.

ಮೃತರು ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಡಾ. ಪ್ರದೀಪ್ ಸಾಮಗ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

Leave a Reply