ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸುರಭಿ ರಿ. ಬೈಂದೂರು ಮತ್ತು ನೆಹರು ಯುವ ಕೇಂದ್ರ ಸಹಯೋಗದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಇಲ್ಲಿನ ರೋಟರಿ ಭವನದಲ್ಲಿ ಜರುಗಿತು.
ಬೈಂದೂರು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಮಾತನಾಡಿ, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ದೇಶದ ಏಕತೆ ಮತ್ತು ಐಕ್ಯತೆಗಾಗಿ ನಿರಂತರವಾಗಿ ಶ್ರಮಿಸಿದವರು. ಮೊದಲ ಗೃಹಮಂತ್ರಿಯಾಗಿ ಬೇರೆ ಬೇರೆ ಇದ್ದ ಸಂಸ್ಥಾನಗಳನ್ನು ಒಗ್ಗೂಡಿಸಿ ಒಂದೇ ರಾಷ್ಟ್ರವನ್ನು ಕಟ್ಟುವಲ್ಲಿ ಶ್ರಮಿಸಿದ್ದರು. ತಾನು ಕೈಗೊಂಡ ಕಾರ್ಯವನ್ನು ಪೂರ್ಣಗೊಳಿಸದೆ ಬಿಡುತ್ತಿರಲಿಲ್ಲ ಎಂದರು.
ಸುರಭಿ ಬೈಂದೂರು ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೆಂದ್ರದ ಸ್ವಯಂಸೇವಕ ಸುನಿಲ್ ಪ್ರ್ರಾಸ್ತಾವಿಕ ಮಾತುಗಳನ್ನಾಡಿದರು ಸುರಭಿ ಕಾರ್ಯದರ್ಶಿ ಭಾಸ್ಕರ ಬಾಡ ಕಾರ್ಯಕ್ರಮ ನಿರೂಪಿಸಿ, ನಿರ್ದೇಶಕ ಸುಧಾಕರ ಪಿ. ವಂದಿಸಿದರು.










