ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಮಾನವಿಕ ವಿಭಾಗದ ಆಶ್ರಯದಲ್ಲಿ ಕೃಷಿ, ಪಶು – ಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆ ಜೊತೆಗೆ ಸರಕಾರದ ವಿವಿಧ ಯೋಜನೆಗಳ ಕುರಿತು ಮಾಹಿತಿ ಸಂಗ್ರಹಿಸುವ ಹಿನ್ನಲೆಯಲ್ಲಿ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಲಾಯಿತು.
ಕೃಷಿ ವಿಜ್ಞಾನ ಕೇಂದ್ರದ ಪ್ರಾಂಶುಪಾಲರಾದ ಡಾ. ಕೆ. ವಿ. ಸುಧೀರ್ ಕಾಮತ್, ಪೊ. ಸಂದೇಶ್, ತಾಂತ್ರಿಕ ಅಧಿಕಾರಿಯಾದ ರಂಜಿತ್ ಜಿ. ಎಚ್. ಹಾಗೂ ದಿನೇಶ್‌ರವರು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧಾಕರ್ ಪಾರಂಪಳ್ಳಿ ಹಾಗೂ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಕಾರ್ಯಕ್ರಮವನ್ನು ಆಯೋಜಿಸಿದರು.










