ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಸಮೀಪದ ಮಾರಣಕಟ್ಟೆಯಲ್ಲಿ ನಡೆದ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಂಡಬಳ್ಳಿ ಜಯರಾಮ ಶೆಟ್ಟಿ ಅವರಿಗೆ ಸನ್ಮಾನ ಸಮಾರಂಭ ನಡೆಯಿತು.
ಸನ್ಮಾನಿಸಿ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ, ಸ್ವಾರ್ಥ ಚಿಂತನೆ ಗಳನ್ನು ಆಳವಡಿಸಿಕೊಳ್ಳದೆ, ಸಮಾಜಮುಖಿಯಾಗಿ ಬೆಳೆದಾಗ, ಸಮಾಜ ಅಂತಹವರನ್ನು ಗುರುತಿಸುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ದೇವಸ್ಥಾನದ ಆಡಳಿತ ಮೊಕ್ತೇಸರ ಬಸ್ರೂರು ಅಪ್ಪಣ್ಣ ಹೆಗ್ಡೆ, ಸಮಾಜ ಸೇವೆಯಲ್ಲಿಯೇ ಭಗವಂತನನ್ನು ಕಾಣುವವರಿಗೆ ಭಗವಂತನ ಶ್ರೀರಕ್ಷೆ ಯಾವಾಗಲೂ ಇರುತ್ತದೆ ಎಂದರು. ಸಮಾಜದೊಂದಿಗೆ ಬೆಳೆಯುತ್ತಾ, ನಮ್ಮ ದುಡಿಮೆಯ ಒಂದು ಪಾಲನ್ನು ಸಮಾಜಕ್ಕೆ ನೀಡುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಹೇಳಿದರು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಡಾ. ಅತುಲ್‌ಕುಮಾರ್ ಶೆಟ್ಟಿ, ತಾಲ್ಲೂಕು ಪಂಚಾಯಿತಿ ಸದಸ್ಯ ಉದಯ ಜಿ.ಪೂಜಾರಿ, ವಂಡ್ಸೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸಬ್ಲಾಡಿ ಎನ್.ಮಂಜಯ್ಯ ಶೆಟ್ಟಿ, ಉದ್ಯಮಿ ರಾಮಚಂದ್ರ ಮಂಜ, ಮಾರಣಕಟ್ಟೆದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಸದಾಶಿವ ಶೆಟ್ಟಿ, ಲೆಕ್ಕಾಧಿಕಾರಿ ನಾರಾಯಣ ಶೆಟ್ಟಿ, ಅರ್ಚಕ ವಿಘ್ನೇಶ್ವರ ಮಂಜ, ಎಂ. ಎಸ್. ಮಂಜ ಚಾರಿಟಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ನಾಗರಾಜ ಮಂಜ, ಚಿತ್ತೂರು ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ರಘುರಾಮ ಶೆಟ್ಟಿ, ಪ್ರೌಢಶಾಲಾ ಕಾರ್ಯಾಧ್ಯಕ್ಷ ರವಿರಾಜ್ ಶೆಟ್ಟಿ, ನಟ ಕವೀಶ್ ಶೆಟ್ಟಿ , ಮುಖ್ಯ ಶಿಕ್ಷಕ ಬಾಲಕೃಷ್ಣ ಶೆಟ್ಟಿ , ನೀಲಕಂಠ ಮರ್ಡಿ, ರವಿರಾಜ್ ಶೆಟ್ಟಿ , ದಿವಾಕರ ಆಚಾರ್ಯ ಮಾರಣಕಟ್ಟೆ , ಪತ್ರಕರ್ತ ಚಿತ್ತೂರು ಪ್ರಭಾಕರ ಆಚಾರ್ಯ ಇದ್ದರು.