ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕುಗಳ ಪ್ರಾಂಶುಪಾಲರ ಸಭೆಯಲ್ಲಿ2020-21 ನೇ ಸಾಲಿನ ಆಡಳಿತ ಮತ್ತು ಶೈಕ್ಷಣಿಕ ಚಟುವಟಿಗಳ ಬಗ್ಗೆ ಚರ್ಚಿಸಲಾಯಿತು.
ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಕರಾದ ಭಗವಂತ ಕಟ್ಟಿಮನಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕೊರೊನಾ ಎಂಬ ಮಹಾಮಾರಿಯಿಂದಾಗಿ ಪ್ರಸ್ತುತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಆತಂಕ ಉಂಟು ಮಾಡಿದರೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಯೂಟ್ಯೂಬ್ ತರಗತಿಗಳನ್ನು ನಡೆಸುತ್ತಿದ್ದು ಇದನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗಬೇಕು, ಡಿಸೆಂಬರ್ ಪ್ರಥಮ ವಾರದಲ್ಲಿ ಪದವಿಪೂರ್ವ ಕಾಲೇಜುಗಳು ಆರಂಭವಾಗಬಹುದು ಎಂಬ ಆಶಯವನ್ನು ವ್ಯಕ್ತಪಡಿಸಿದರು. ಕಾಲೇಜು ಪ್ರಾರಂಭವಾದರೆ ಕಾಲೇಜಿನಲ್ಲಿ ಯಾವ ರೀತಿಯ ಮುಂಜಾಗೃತಾ ಕ್ರಮವನ್ನು ಅನುಸರಿಸಬೇಕು ಎಂದು ತಿಳಿಸಿದರು. ತರಗತಿಯ ಅವಧಿಯನ್ನು ಕಡಿತಗೊಳಿಸುವುದರ ಬಗ್ಗೆ ಸುಳಿವು ನೀಡಿದ ಉಪನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿರುವ ಪ್ರಾಂಶುಪಾಲರುಗಳಿಗೆ ಈ ವರ್ಷದ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಕೆ. ರಾಧಾಕೃಷ್ಣ ಶೆಣೈಯವರು ವಹಿಸಿದರು. ಉಡುಪಿ ಜಿಲ್ಲಾ ಪದವಿಪೂರ್ವ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಮಾಧವ್ ಭಟ್, ಕಾರ್ಯದರ್ಶಿ ಡಾ. ದಯಾನಂದ ಪೈ ಹಾಗೂ ಶ್ರೀ. ವೆಂಕಟರಮಣ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ಮಾರ್ಗದರ್ಶಕಿ ಚಿತ್ರಾ ಕಾರಂತ , ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಸಾಯನಶಾಸ್ತ್ರ ಉಪನ್ಯಾಸಕ ಸಂದೀಪ ಗಾಣಿಗ ವಂದಿಸಿದರು, ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ನಿರೂಪಿಸಿದರು.