ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ. ಇಬ್ರಾಹಿಮಾಪೂರ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಆರ್ಟ್ ಗ್ಯಾಲರಿ, ರಂಗ ಮಂದಿರ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿದರು.
ವೀಕ್ಷಿಸಿ ಮಾತನಾಡಿದ ಎಚ್.ವಿ. ಇಬ್ರಾಹಿಮಾಪೂರ, ಕಾರಂತರು ನಮಗಾಗಿ ತುಂಬಾ ನೆನಪುಗಳನ್ನು, ಬದುಕಿನ ಪಾಠಗಳನ್ನು ನೀಡಿದ್ದಾರೆ ಅದನ್ನು ಜನರಿಗೆ ತಲುಪಿಸುವ ಕಾರ್ಯ ಕಾರಂತ ಥೀಮ್ ಪಾರ್ಕ್‌ನಿಂದ ಆಗುತ್ತಿದ್ದೆ, ಇದು ಇನ್ನಷ್ಟೂ ಪ್ರಸಿದ್ದಿ ಹೊಂದಿ ಇನ್ನಷ್ಟೂ ಪ್ರವಾಸಿಗರು ಆಗಮಿಸಿ ಕಾರಂತ ಬದುಕು – ಬರಹ ಎಲ್ಲಾರಿಗೂ ತಲುಪುವಂತೆ ಆಗಲಿ ಎಂದು ಹೇಳಿದರು.
ಅಂಗನವಾಡಿಯ ಸ್ತ್ರೀ – ಶಕ್ತಿ ಸಂಘದ ಸದಸ್ಯರಿಗೆ ಬಚ್ಚಲು ಗುಂಡಿ ನಿರ್ಮಾಣ – ಪೌಷ್ಠಿಕ ತೋಟದ ನಿರ್ಮಾಣಕ್ಕೆ ಸರಕಾರಿಂದ ಸಿಗುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬ್ರಹ್ಮಾವರ ತಾಲೂಕು ಪಂಚಾಯತ್ ಪ್ರಭಾರ ಸಹಾಯಕ ನಿರ್ದೇಶಕ ಮಹೇಶ್ , ಕೋಟತಟ್ಟು ಗ್ರಾಮ ಪಂಚಾಯತ್ ಪಿ.ಡಿ.ಓ ಶೈಲಾ ಎಸ್ ಪೂಜಾರಿ, ಗ್ರಂಥಾಲಯ ಮೇಲ್ವಿಚಾರಕಿ ಶೈಲಜಾ ಕೆ.ಎನ್ , ಅಂಗನವಾಡಿ ಕಾರ್ಯಕರ್ತೆ ಜಯಲಕ್ಷ್ಮೀ, ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್, ಪಂಚಾಯತ್ ಸಿಬ್ಬಂದಿ ನವೀನ್ ಉಪಸ್ಥಿತರಿದ್ದರು.